ಮಂಗಳೂರು: ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಮಂಗಳೂರು, ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವು ಫೆಬ್ರವರಿ 2 ರಂದು ಬೆಳಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆಬ್ರವರಿ 3 ರಂದು ಬೆಳಗ್ಗೆ 10 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0824-2451264 ಹಾಗೂ www.adyssdk@yahoo.com ನ್ನು ಸಂಪರ್ಕಿಸುವಂತೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ➤ ಬಾಲಕಿಯ ಪೋಷಕರ ಆಕ್ರೋಶಕ್ಕೆ ಬಲಿಯಾದ ಆರೋಪಿ

error: Content is protected !!
Scroll to Top