ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 28. ಸಮುದ್ರದ ಅಲೆಗಳ ಅಬ್ಬರಕ್ಕೆ ದೋಣಿಯೊಂದು ಮಗುಚಿ ಬಿದ್ದಿದ್ದು, ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ.

ಗಂಗೊಳ್ಳಿಯ ಮೀನುಗಾರಿಕಾ ಬಂದರಿನಿಂದ ‘ಸೌಮ್ಯ’ ಎಂಬ ಹೆಸರಿನ ನಾಡ ದೋಣಿಯೊಂದು ಗುರುವಾರ ಬೆಳಗ್ಗೆ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಸಮುದ್ರದಲ್ಲಿ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಈ ಸಮದರ್ಭದಲ್ಲಿ ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ನೀರಿಗೆ ಹಾರಿ ಈಜಿ ಇನ್ನೊಂದು ದೋಣಿ ಮೂಲಕ ಸುರಕ್ಷಿತವಾಗಿ ದಡ ಸೇರಿದ್ದಾರೆ. ಇನ್ನಿಬ್ಬರು ಮೀನುಗಾರರನ್ನು ಸಮೀಪದಲ್ಲಿಯೇ ಮೀನುಗಾರಿಕಾ ನಿರತವಾಗಿದ್ದ ಇನ್ನೊಂದು ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ದೋಣಿ, ಅದರ ಇಂಜಿನ್ ಮತ್ತು ಮೀನು ಹಿಡಿಯುವ ಬಲೆ ಸಮುದ್ರ ಪಾಲಾಗಿದ್ದು, ಸುಮಾರು ಐದು ಲಕ್ಷಕ್ಕೂ ಮಿಕ್ಕಿ ನಷ್ಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ನಿಲ್ಲಿಸಿದ್ದ ಲಾರಿಗೆ ರಿಕ್ಷಾ ಡಿಕ್ಕಿ ➤ ಮೀನು ವ್ಯಾಪಾರಿಯಾಗಿದ್ದ ರಿಕ್ಷಾ ಚಾಲಕ ಮೃತ್ಯು

error: Content is protected !!
Scroll to Top