ಸಿಎಫ್ಐ ಬೆಳ್ತಂಗಡಿ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆ ➤ ನೂತನ ಅಧ್ಯಕ್ಷರಾಗಿ ಯಾಸೀನ್ ಬಂಗೇರಕಟ್ಟೆ, ಕಾರ್ಯದರ್ಶಿಯಾಗಿ ಶಹೀರ್ ಪಾಂಡವರಕಲ್ಲು ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 28. ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ಜಿಲ್ಲಾ ಪ್ರತಿನಿಧಿ ಸಭೆಯನ್ನು ಇಂದು ಇಲ್ಲಿ‌ನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಯ್ತು.

ಕಾರ್ಯಕ್ರಮದ ಧ್ವಜಾರೋಹಣವನ್ನು ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಸಫ್ವಾನ್ ಸುನ್ನತ್ ಕೆರೆ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಭಾಷಾ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ವಿಡಿಯೋ ಮುಖಾಂತರ ರಾಜ್ಯಾಧ್ಯಕ್ಷರಾದ ಫಯಾಜ್ ದೊಡ್ಡಮನೆ ಅವರು ಸಂದೇಶ ಭಾಷಣವನ್ನು ಮಾಡಿದರು. ಕಳೆದ ವರ್ಷದ ವರದಿಯನ್ನು ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಮಂಡಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ನೂತನ ಉಪಾಧ್ಯಕ್ಷರಾಗಿ ತೌಸೀಫ್, ಜೊತೆ ಕಾರ್ಯದರ್ಶಿಯಾಗಿ ಆರಿಫ್ ಲಾಯಿಲ ಹಾಗು ಕೋಶಾಧಿಕಾರಿಯಾಗಿ ಝಾಹೀದ್ ಸುನ್ನತ್ ಕೆರೆ ಆಯ್ಕೆಯಾದರು. ಕಾರ್ಯಕ್ರಮದ ಕೊನೆಯಲ್ಲಿ ಜಿಲ್ಲಾ ಮುಖಂಡ ಸವಾದ್ ಕಲ್ಲರ್ಪೆ ಅವರು ಸಮಾರೋಪ ಮಾತುಗಳನ್ನು ಆಡಿದರು. ಅಲ್ತಾಫ್ ಮದ್ದಡ್ಕ ಕಾರ್ಯಕ್ರಮವನ್ನು ನಿರೂಪಿಸಿದರು.

Also Read  ಅಂತಿಮ ಹಂತ ತಲುಪಿದ ಮಂಗಳೂರು- ಬೆಂಗಳೂರು ರೈಲು ಮಾರ್ಗದ ದುರಸ್ತಿ ಕಾರ್ಯ

error: Content is protected !!
Scroll to Top