ಓವರ್‌ಟೇಕ್ ಭರದಲ್ಲಿ ಬೈಕ್ ಗಳ‌ ನಡುವೆ ಮುಖಾಮುಖಿ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಜ.28. ಬೈಕುಗಳ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸವಾರನೋರ್ವ ರಸ್ತೆಗೆ ಎಸೆಯಲ್ಪಟ್ಟು ಅದೇ ದಾರಿಯಲ್ಲಿ ಬರುತ್ತಿದ್ದ ಬಸ್ಸಿನಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಹಳೆಯಂಗಡಿ ಸಮೀಪದ ಲೈಟ್ ಹೌಸ್ ಬಳಿ ನಡೆದಿದೆ.

ಮೃತ ಯುವಕನನ್ನು ಮೂಡುಬಿದ್ರೆ ನಿವಾಸಿ ಮೋಕ್ಷಿತ್ (19) ಎಂದು ಗುರುತಿಸಲಾಗಿದೆ. ಹಳೆಯಂಗಡಿಯಿಂದ ಕಿನ್ನಿಗೋಳಿ ಕಡೆಗೆ ತೆರಳುತ್ತಿದ್ದ ಬೈಕಿಗೆ ಲೈಟ್ ಹೌಸ್ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಈ ವೇಳೆ ಹಿಂದಿನಿಂದ ಬರುತ್ತಿದ್ದ ಬಸ್ ಬೈಕ್ ಸವಾರನ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ. ಸುರತ್ಕಲ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group