ಬೆಳ್ತಂಗಡಿ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 29. ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆಗೈದವರನ್ನು ಲಾಯಿಲ ಗ್ರಾಮದ ರಾಘವೇಂದ್ರ ಮಠದ ಬಳಿ ನಿವಾಸಿ ಸಂಜೀವ ಸಫಲ್ಯ ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದು, ವಿಪರೀತ ಕುಡಿತದ‌ ಚಟ ಹೊಂದಿದ್ದರು. ಪೈನಾನ್ಸ್ ನಲ್ಲಿ ಸಾಲ ಮಾಡಿದ ಇವರು ಅದನ್ನು ತೀರಿಸಲಾಗದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಇದೇ ವಿಚಾರದಲ್ಲಿ ಮನನೊಂದು ತನ್ನ ಮನೆಯ ಕೋಣೆಯಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Also Read  ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ

error: Content is protected !!
Scroll to Top