ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 29. ದ.ಕ ಜಿಲ್ಲೆಯ ಸಾರಿಗೆ ಇಲಾಖೆ ವತಿಯಿಂದ ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭ ಕಾರ್ಯಕ್ರಮವನ್ನು  ಜನವರಿ 30 ರಂದು ಮಧ್ಯಾಹ್ನ 12.30ಕ್ಕೆ ಪಜೀರು ಗ್ರಾಮದ ಕೆ.ಐ.ಎ.ಡಿ.ಬಿ. ಕಂಬ್ಳಪದವು ಹತ್ತಿರ ಹಮ್ಮಿಕೊಳ್ಳಲಾಗಿದೆ. ಮಾನ್ಯ ಉಪ ಮುಖ್ಯ ಮಂತ್ರಿಗಳು ಹಾಗೂ  ಸಾರಿಗೆ ಸಚಿವರಾದ ಲಕ್ಷ್ಮಣ ಸಂಗಪ್ಪ ಸವದಿರವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.


ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿರವರು ದೀಪ ಪ್ರಜ್ವಲನ ಮಾಡಲಿದ್ದಾರೆ. ಶಾಸಕ ಯು.ಟಿ. ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್‍ನ ಸಭಾಪತಿ ಕೆ. ಪ್ರತಾಪ ಚಂದ್ರ ಶೆಟ್ಟಿ, ಮೀನುಗಾರಿಕೆ ಹಾಗೂ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್., ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ. ವೈ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್. ಯು, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೂಡಬಿದ್ರೆ ಶಾಸಕ ಎ. ಉಮಾನಾಥ್ ಕೋಟ್ಯಾನ್, ವಿಧಾನ ಪರಿಷತ್ ಶಾಸಕ ಬಿ. ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್. ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್. ಕೆ, ಕ.ರಾ.ರ.ಸ.ನಿಗಮದ ಅಧ್ಯಕ್ಷ ಹಾಗೂ ಶಾಸಕರಾದ ಎಂ. ಚಂದ್ರಪ್ಪ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷ ಸಂತೋಷ ರೈ ಬೋಲಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ತಾಲೂಕು ಪಂಚಾಯತ್ ಅಧ್ಯಕ್ಷ ಕೆ. ಚಂದ್ರಹಾಸ ಕರ್ಕೇರಾ ಉಪಸ್ಥಿತರಿರುವರು.

Also Read  ಸುಬ್ರಹ್ಮಣ್ಯ: ಹೊರರೋಗಿ ಚಿಕಿತ್ಸಾ ವಿಭಾಗಕ್ಕೆ ಶಾಸಕರಿಂದ ಶಂಕುಸ್ಥಾಪನೆ

error: Content is protected !!
Scroll to Top