ಅತಿಥಿ ಉಪನ್ಯಾಸಕರ ಹುದ್ದೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 29. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ವಿಶ್ವವಿದ್ಯಾನಿಲಯ ಆವರಣ ಮಂಗಳಗಂಗೋತ್ರಿ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಮಡಿಕೇರಿಯಲ್ಲಿ ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಪ್ರಸ್ತುತ ಶೈಕ್ಷಣಿಕ ಸಾಲಿನ ವಿವಿಧ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಜನವರಿ 30ರೊಳಗೆ ಕುಲಸಚಿವರ ಕಚೇರಿಗೆ ಸಲ್ಲಿಸಬೇಕು. ಅಥವಾ ಇಮೇಲ್ ಮೂಲಕ ಅರ್ಜಿ ಸಲ್ಲಿಸುವವರು devsectionmu@gmail.com ಗೆ ದಾಖಲೆಗಳನ್ನು ಕಳುಹಿಸಿಕೊಡಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕಚೇರಿ ದೂರವಾಣಿ ಸಂಖ್ಯೆ: 0824-2287276ನ್ನು ಸಂಪರ್ಕಿಸಲು ಮಂಗಳಗಂಗೋತ್ರಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಆಲೆಟ್ಟಿ: ಮದ್ಯರಾತ್ರಿ ಮನೆ ಹಿಂಬದಿಯ ಬರೆ ಕುಸಿತ ➤ ಪ್ರಾಣಾಪಾಯದಿಂದ ಪಾರಾದ ದಂಪತಿ

error: Content is protected !!
Scroll to Top