ಪುತ್ತೂರು: ಅಕ್ರಮ ಜಿಂಕೆಯ ಕೊಂಬು ಸಾಗಾಟ ➤ ಓರ್ವ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 29. ಅಕ್ರಮವಾಗಿ ಜಿಂಕೆ ಕೊಂಬು ಸಾಗಾಟವನ್ನು ಪತ್ತೆಹಚ್ಚಿದ ಕೊಂಬಿನ ಜೊತೆ ಓರ್ವ ಆರೋಪಿಯನ್ನು ಬಂಧಿಸಿದ ಘಟನೆ ಸೂತ್ರಬೆಟ್ಟು, ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ.

ಬಂಧಿತ ಆರೋಪಿಯನ್ನು ಕಬಕ ನಿವಾಸಿ ಶೇಖ್ ಅನ್ಸಾರ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ. ಸೂತ್ರಬೆಟ್ಟು ಸಮೀಪ ಮಾರುತಿ ಕಾರಿನಲ್ಲಿ ಜಿಂಕೆ ಕೊಂಬಿ ಸಾಗಿಸುತ್ತಿದ್ದ ವೇಳೆ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ಪುತ್ತೂರು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳ ಜೊತೆಗೆ 50 ಸಾವಿರ ರೂ. ಮೌಲ್ಯದ ಜಿಂಕೆ ಕೊಂಬು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿ, ಹೆಚ್ಚಿನ ತನಿಖೆಗಾಗಿ ಪೊಲೀಸ್ ಅರಣ್ಯ ಸಂಚಾರ ದಳದವರು ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Also Read  ಪುತ್ತೂರು: ಬೆಂಕಿ ಅವಘಡ ➤ ಮನೆ ಸಂಪೂರ್ಣ ಭಸ್ಮ

error: Content is protected !!
Scroll to Top