(ನ್ಯೂಸ್ ಕಡಬ) newskadaba.com ಅಹಮದ್ ನಗರ, ಜ. 29. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾಹಝಾರೆ ಅವರು ನಾಳೆಯಿಂದ ಮಹಾರಾಷ್ಟ್ರದ ಅಹಮದ್ ನಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ.
ಅಲ್ಲದೇ ತಾವಿರುವ ಪ್ರದೇಶಗಳಿಂದಲೇ ರೈತರ ಪರವಾಗಿ ಪ್ರತಿಭಟನೆ ನಡೆಸುವಂತೆ ಅವರು ತಮ್ಮ ಬೆಂಬಲಿಗರಲ್ಲಿ ವಿನಂತಿಸಿದ್ದಾರೆ.