ಕಲಾಪದ ವೇಳೆ ಬ್ಲೂಫಿಲಂ ವೀಕ್ಷಿಸಿದ ಕಾಂಗ್ರೆಸ್ ಶಾಸಕ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 29. ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಠೋಡ್ ಅವರು ಮೊಬೈಲ್‌ ನಲ್ಲಿ ನೀಲಿ ಚಿತ್ರ ವೀಕ್ಷಣೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇಂದು ವಿಧಾನಪರಿಷತ್​ ಕಲಾಪ ನಡೆಯುತ್ತಿದ್ದ ವೇಳೆ ಕಾಂಗ್ರೆಸ್​ ಎಂ.ಎಲ್​.ಸಿ ಪ್ರಕಾಶ್ ರಾಥೋಡ್ ಅವರು ಮೊಬೈಲ್​ನಲ್ಲಿ ಅಶ್ಲೀಲ ವಿಡಿಯೋ ನೋಡುತ್ತಿದ್ದ ದೃಶ್ಯವು ಇದೀಗ ಮಾಧ್ಯಮಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಘಟನೆಯ ಕುರಿತು ಮಾತನಾಡಿದ ಪ್ರಕಾಶ್ ರಾತೋಡ್, ನಾನು ಅಶ್ಲೀಲ ವಿಡಿಯೋ ನೋಡಿಲ್ಲ. ನೂರಾರು ಗ್ರೂಪ್​ಗಳಲ್ಲಿ ಇದ್ದೇನೆ ಸಾವಿರಾರು ವಿಡಿಯೋಗಳಿವೆ, ಸ್ಟೋರೇಜ್ ಫುಲ್ ಆಗಿತ್ತು. ಅದನ್ನು ಡಿಲೀಟ್ ಮಾಡ್ತಿದ್ದೆ. ಅದು ಅಶ್ಲೀಲ ವಿಡಿಯೋನಾ ಎನ್ನೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

error: Content is protected !!
Scroll to Top