ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶೀನಿವಾಸ ಪೂಜಾರಿ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 30. ಮುಜರಾಯಿ, ಹಿಂದುಳಿದ ವರ್ಗಗಳ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ರವರು ಜನವರಿ 30 ಹಾಗೂ 31 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಜನವರಿ 30 ರಂದು ಮಧ್ಯಾಹ್ನ 12.30ಕ್ಕೆ ಪಜೀರು ಗ್ರಾಮದ ಕೆ.ಐ.ಎ.ಡಿ.ಬಿ., ಕಂಬ್ಲಪದವು ಹತ್ತಿರ  ಭಾರಿ ವಾಹನ ಚಾಲನಾ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮಂಗಳೂರಿನಿಂದ ಉಡುಪಿಗೆ ಪ್ರಯಾಣಿಸಲಿದ್ದಾರೆ. ಜನವರಿ 31 ರಂದು ಬೆಳಿಗ್ಗೆ 10 ಗಂಟೆಗೆ ಮೂಡಬಿದಿರೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4 ಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆ ರತ್ನವರ್ಮ ಕ್ರೀಡಾಂಗಣದಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.  ರಾತ್ರಿ 8 ಕ್ಕೆ ಮಂಗಳೂರಿನಿಂದ  ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Also Read  ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ

error: Content is protected !!
Scroll to Top