ಪ.ಜಾ/ ಪ.ಪಂಗಡದ ಸಂಘ ಸಂಸ್ಥೆಗಳಿಂದ ಸಹಾಯಧನಕ್ಕೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 30. ಪ್ರಸ್ತುತ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಹೊಸದಾಗಿ ನೋಂದಾವಣಿಗೊಳ್ಳುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಜನ ಸಂಘ ಸಂಸ್ಥೆಗಳಿಗೆ ಸಹಾಯಧನ ಹಾಗೂ ಕ್ರೀಡಾಗಂಟು ನೀಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 5 ಕೊನೆಯ ದಿನ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ ದೂ.ಸಂಖ್ಯೆ: 0824-2451264 ಹಾಗೂ www.adyssk@yahoo.com ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮಂಗಳೂರು: ನಕಲಿ ನೋಟು ಚಲಾವಣೆ       ➤ 4 ವರ್ಷ ಸಜೆ…!!!

error: Content is protected !!
Scroll to Top