ಪ.ಜಾ/ ಪ.ಪಂಗಡದ ಅರ್ಹ ಕ್ರೀಡಾಪಟುಗಳಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 30. ಪ್ರಸ್ತುತ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಹಿಂದಿನ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ/ಅಂತರಾಜ್ಯ/ ಅಂತರ-ವಿಶ್ವವಿದ್ಯಾಲಯ/ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಗಣನೀಯ ಸಾಧನೆ ದಾಖಲಿಸಿರುವ ಪ್ರತಿಭಾವಂತ ಕ್ರೀಡಾಪಟುಗಳಿಗೆ (ವಿಕಲಚೇತನ ಕ್ರೀಡಾಪಟುಗಳು ಸೇರಿದಂತೆ) ನೋಂದಾಯಿತ ಕ್ರೀಡಾ ವಿಜ್ಞಾನ ಸಂಸ್ಥೆಗಳಲ್ಲಿ ಸೇವೆಯನ್ನು ಪಡೆಯಲು ಸಹಾಯಧನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಕ್ರೀಡಾಪಟುಗಳು ತಮ್ಮ ಹಿಂದಿನ ಕ್ಯಾಲೆಂಡರ್ ವರ್ಷದ ಕ್ರೀಡಾ ಸಾಧನೆಗಳೊಂದಿಗೆ ಫೆಬ್ರವರಿ 5 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ ದೂ.ಸಂಖ್ಯೆ: 0824-2451264 ಹಾಗೂ www.adyssk@yahoo.com ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group