ಕೆಎಸ್ಸಾರ್ಟಿಸಿ ಚಾಲಕನ ನಿರ್ಲಕ್ಷ್ಯ ಮತ್ತು ಅಜಾಗರೂಕತೆ ➤ ಪ್ರಯಾಣಿಕ ಮಹಿಳೆ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 30. ಕೆಎಸ್ಸಾರ್ಟಿಸಿ ಬಸ್ ಚಾಲಕನೋರ್ವ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಬಸ್ಸಿನ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೋರ್ವರು ಹೊರಕ್ಕೆಸೆಯಲ್ಪಟ್ಟು ಡಾಮಾರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕರವೀರ ಅಂಗನವಾಡಿ ಬಳಿ ನಡೆದಿದೆ.


ಗಂಭೀರ ಗಾಯಗೊಂಡವರನ್ನು ಬಂಟ್ವಾಳ ತಾಲೂಕು ಕೇಪು ಗ್ರಾಮದ ಮೈರಕವೀರದವರಾದ ಪುಷ್ಪಾವತಿ ಎಂದು ಗುರುತಿಸಲಾಗಿದೆ. ಇವರು ಫೋಟೋ ತೆಗೆಸಲೆಂದು ವಿಟ್ಲ ಪೇಟೆಗೆ ತಮ್ಮ ಮಗಳು ಹಾಗೂ ಮೊಮ್ಮಗಳೊಂದಿಗೆ ಹೋಗಿ ವಾಪಸು ಮನೆಗೆ ಬರಲು ಕೆಎಸ್ಸಾರ್ಟಿಸಿ ಬಸ್ಸಿನಲ್ಲಿದ್ದ ಸಂದರ್ಭ ಕರವೀರ ಅಂಗನವಾಡಿ ಬಳಿಯ ತಿರುವಿನಲ್ಲಿ ಚಾಲಕನ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಪರಿಣಾಮ ಸೀಟಿನಲ್ಲಿ ಕುಳಿತಿದ್ದ ಪುಷ್ಪಾವತಿಯವರು ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟು ಡಾಂಬಾರು ರಸ್ತೆಗೆ ಬಿದ್ದಿದ್ದು, ಪರಿಣಾಮ ಪುಷ್ಪಾವತಿಯವರು ಗಂಭೀರ ಗಾಯಗೊಂಡಿದ್ದಾರೆ. ಇವರಿಗೆ ವಿಟ್ಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಗೆ ಅಡಿಕೆ ಕಳ್ಳರು ಅಂದರ್ ► ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಅಡಿಕೆ ವಶ

error: Content is protected !!
Scroll to Top