ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲಿಸ್ ಆಯುಕ್ತರಾದ ಶಶಿಕುಮಾರ್ ಅವರು ಶಿಸ್ತುಕ್ರಮ ಕೈಗೊಂಡಿದ್ದು, ತಪ್ಪಿತಸ್ಥ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ.

ಬಾರೊಂದರಲ್ಲಿ ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ಕೈಗೊಳ್ಳುವಂತರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಆಯುಕ್ತರು ಸೂಚಿಸಿದ್ದು,‌ ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಕಾರಣ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಿದ್ದಾರೆ. ಪ್ರಕರಣದಲ್ಲಿ ಎ.ಎಸ್.ಐಗಳು, ಐದು ಹೆಡ್ ಕಾನ್ಸ್ ಟೇಬಲ್ ಗಳಿದ್ದು ಅವರನ್ನು ಕೊಣಾಜೆ, ಬಜ್ಪೆ, ಕಂಕನಾಡಿ ನಗರ, ಪಾಂಡೇಶ್ವರ, ಬಂದರು, ಉರ್ವ ಮತ್ತು ಬರ್ಕೆ ಠಾಣೆಗಳಿಗೆ ವರ್ಗಾಯಿಸಿ ಆದೇಶ ಮಾಡಲಾಗಿದೆ. ಇಂದಿನಿಂದಲೇ ನಿಯೋಜಿಸಿದ ಠಾಣೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

Also Read  ಭಾರಿ ಮಳೆಗೆ ಕೊಲ್ಲಮೊಗ್ರದ ಮನೆಗಳಿಗೆ ನುಗ್ಗಿದ ನೀರು

error: Content is protected !!
Scroll to Top