ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಚಿವ ಎಸ್.ಅಂಗಾರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜ.31. ತಾಲೂಕಿನ ಕೊಂಬಾರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ಬಂದರು, ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರು ಭೇಟಿ ನೀಡಿದರು.

ಗ್ರಾಮಸ್ಥರ ಪರವಾಗಿ ಈಶ್ವರಪ್ಪ ರವರನ್ನು ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಲಾಯಿತು. ಸಚಿವರು ಕಳೆದ‌ ವರ್ಷ ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪುಸ್ತಕ ಬಿಡುಗಡೆಗೊಳಿಸಿದರು. ಗ್ರಾಮದ ನಾಲ್ವರು ಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ವಿತರಿಸಿದರು. ಕಾರ್ಯಕ್ರಮದಲ್ಲಿ ನೂತನ ಸಚಿವರಾದ ಎಸ್. ಅಂಗಾರರವರನ್ನು ಗೌರವಿಸಲಾಯಿತು.

Also Read  ಅರಂತೋಡು: ಎಸ್ಕೆಎಸ್ಸೆಸ್ಸೆಫ್ ಸ್ಥಾಪಕ ದಿನಾಚರಣೆ

error: Content is protected !!
Scroll to Top