ಕೊಂಬಾರನ್ನು ಸಂಪರ್ಕಿಸುವ ನಾಲ್ಕು ರಸ್ತೆಗಳಿಗೆ ಶೀಘ್ರದಲ್ಲೇ ಅಭಿವೃದ್ಧಿ ಭಾಗ್ಯ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಘೋಷಣೆ

ಕಡಬ, ಜ.31. ತಾಲೂಕಿನ ಕೊಂಬಾರು ಗ್ರಾಮ ಸಂಪರ್ಕದ ನಾಲ್ಕು ರಸ್ತೆಗಳನ್ನು ಶೀಘ್ರದಲ್ಲೇ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ ಘೋಷಿಸಿದರು.

ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ವಾಸ್ತವ್ಯ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರಕ್ಕೆ ಭೇಟಿ ನೀಡಿದ ಸಚಿವರುಗಳು ವಿವಿಧ ಇಲಾಖೆಗಳ ಸ್ಟಾಲ್ ಗಳನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀ ಪ್ರಸಾದ್, ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಳ್, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತಿತರರು ಉಪಸ್ಥಿತರಿದ್ದರು. ಸಚಿವರಾದ ಕೆ.ಎಸ್.ಈಶ್ವರಪ್ಪ, ಹಾಗು ಎಸ್.ಅಂಗಾರ ಅವರನ್ನು ಸನ್ಮಾನಿಸಲಾಯಿತು.

Also Read  'ಆಕ್ಸಿಜನ್ ದುರಂತ; ಡಿಕೆಶಿ ಆರೋಪಕ್ಕೆ ಸದನದಲ್ಲಿ ಉತ್ತರಿಸಿದ್ದೇನೆ'     ➤  ಸಚಿವ ಕೆ. ಸುಧಾಕರ್

error: Content is protected !!
Scroll to Top