(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಅಕ್ರಮವಾಗಿ ಚಿನ್ನಸಾಗಿಸುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕಾಸರಗೋಡು ಮೂಲದ ಮಶ್ಕೂರ್ ಎಂದು ಗುರುತಿಸಲಾಗಿದೆ. ಈತನ ಬಳಿ ಸುಮಾರು 30 ಲಕ್ಷ ಮೌಲ್ಯದ 587 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.









