ಸ್ನಾನಕ್ಕೆಂದು ಹೊಳೆಗಿಳಿದ ಇಬ್ಬರು ಸಹೋದರರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಫೆ. 01. ಸ್ನಾನಕ್ಕೆಂದು ಹೊಳೆಗೆ ಇಳಿದ ಸಹೋದರರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರವಿವಾರ ಸಂಜೆ ಕುಂಬಳೆ ಸಮೀಪದ ಬಂಬ್ರಾಣ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಇಚ್ಲಂಗೋಡಿನ ಶರೀಫ್ ಎಂಬವರ ಪುತ್ರರಾದ ಶದಾದ್ (12) ಮತ್ತು ಶಿಯಾಝ್ (8) ಎಂದು ಗುರುತಿಸಲಾಗಿದೆ. ಇವರಿಬ್ಬರು ಬಂಬ್ರಾಣ ಆಣೆಕಟ್ಟು ಸಮೀಪದ ಹೊಳೆಯಲ್ಲಿ ಪರಿಸರದ ಮಕ್ಕಳೊಂದಿಗೆ ಸ್ನಾನಕ್ಕಿಳಿದಿದ್ದು, ಈ ಸಂದರ್ಭ ಸಹೋದರರಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಈ ವೇಳೆ ಜೊತೆಗಿದ್ದ ಮಕ್ಕಳು ಬೊಬ್ಬೆ ಹಾಕಿದ್ದು, ವಿಷಯ ತಿಳಿದ ಸ್ಥಳೀಯರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕಾಗಮಿಸಿ ಹೊಳೆಯಲ್ಲಿ ಶೋಧ ಕಾರ್ಯ ನಡೆಸಿ, ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದೆ. ಈ ಕುರಿತು ಕುಂಬಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Scroll to Top