ಬಂಟ್ವಾಳ: ಸರಪಾಡಿ ಕುಡಿಯುವ ನೀರಿನ ಯೋಜನೆ ವೀಕ್ಷಣೆ ➤ ನೆರೆದಿದ್ದ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 01. ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವೀಕ್ಷಣೆಗೆ ಸಂಬಂಧಿಸಿಂತೆ ಬಿಜೆಪಿ- ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಸಮರ ನಡೆದ ಘಟನೆ ವರದಿಯಾಗಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜ. 31ರಂದು ರಾಜ್ಯ ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದ್ದಾರೆ. ಇದಕ್ಕೆ ಮುಂಚಿತವಾಗಿ ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ನೇತೃತ್ವದಲ್ಲಿ ಕಾಂಗ್ರೆಸ್ ಜನಪ್ರತಿನಿಧಿಗಳು‌ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ ಕೂಡ ಜತೆಗಿದ್ದು, ಆದರೆ, ಸ್ಥಳದಲ್ಲಿ ಬಿಜೆಪಿಯವರು ಸೇರಿದ್ದ ಹಿನ್ನೆಲೆಯಲ್ಲಿ ಪೊಲೀಸರು ಯೋಜನಾ ಘಟಕದ ಗೇಟ್ ಹಾಕಿ ತಡೆದರು. ಈ ವೇಳೆ ಎರಡೂ ಪಕ್ಷಗಳ ಪ್ರಮುಖರ ನಡುವೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆದು, ಪರಿಸ್ಥಿತಿಯನ್ನು ಸಮದೂಗಿಸಲಾಯಿತು.

Also Read  ಮಂಗಳೂರು: ಹೋಟೆಲ್ ನಲ್ಲಿ ಯುವತಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ

error: Content is protected !!
Scroll to Top