75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ತೆರಿಗೆಯಿಂದ ವಿನಾಯಿತಿ ನೀಡಿದ ಕೇಂದ್ರ ಸರ್ಕಾರ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 01. ಕೊರೋನಾದಿಂದಾಗಿ ಕಂಗೆಟ್ಟ ಆರ್ಥಿಕ ವ್ಯವಸ್ಥೆಯನ್ನು ಮೇಲೆತ್ತುವ ಸಲುವಾಗಿ 2021 ರ ಬಜೆಟ್ ಇಂದು ಮಂಡಿಸಲಾಗಿದ್ದು, ಹಿರಿಯ ನಾಗರಿಕರಿಗೆ ವಿನಾಯಿತಿ ನೀಡಲಾಗಿದೆ.

ಬಜೆಟ್ ಮಂಡನೆ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆದಾಯ ತೆರಿಗೆ ವಿನಾಯಿತಿಯಲ್ಲಿ ಯಾವುದೇ ಬದಲಾವಣೆಯಿಲ್ಲ, ಆದಾಯ ತೆರಿಗೆ ಯಥಾ ಸ್ಥಿತಿಯಲ್ಲೇ ಮುಂದುವರೆಯಲಿದೆ. ಇದೇ ವೇಳೆ 75 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರು, ಪಿಂಚಣಿಯಿಂದ ಬರುವ ಆದಾಯ, ಠೇವಣಿ ಮೇಲಿನ ಬಡ್ಡಿಗೆ ಐಟಿ ರಿಟರ್ನ್ಸ್ ಸಲ್ಲಿಸುವುದರಿಂದ ವಿನಾಯಿತಿ ನೀಡಲಾಗಿದೆ. ಇದರಿಂದ ಒಂದು ಪಿಂಚಣಿ ಹಾಗೂ ಒಂದೇ ಬಡ್ಡಿಯ ಯೋಜನೆ ಹೊಂದಿರುವ 75 ವರ್ಷದ ಹಿರಿಯ ನಾಗರಿಕರಿಗೆ ಮಾತ್ರ ಈ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ವಿನಾಯಿತಿ ಅನ್ವಯಿಸಲಿದ್ದು, ವಿವಿಧ ಮೂಲಗಳಿಂದ ಆದಾಯ ಹಾಗೂ ಬಡ್ಡಿಯ ಯೋಜನೆ ಹೊಂದಿರುವ ಹಿರಿಯ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ ಎಂದು ಹೇಳಿದ್ದಾರೆ.

Also Read  ’ಗರ್ಬಾ’ ಹಾಡನ್ನು ಹಂಚಿಕೊಂಡ ಪ್ರಧಾನಿ ಮೋದಿ

error: Content is protected !!
Scroll to Top