ಮಾಣಿ: ಹೆದ್ದಾರಿಗೆ ಅಡ್ಡಲಾಗಿ ಮಗುಚಿ ಬಿದ್ದ ಬುಲೆಟ್ ಟ್ಯಾಂಕರ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.02. ಚಾಲಕನ ನಿಯಂತ್ರಣ ತಪ್ಪಿದ ಬುಲೆಟ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಸೂರಿಕುಮೇರು ಮಸೀದಿಯ ಸಮೀಪದ ತಿರುವಿನಲ್ಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಘಟನೆಯಿಂದ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Scroll to Top