ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಹಿನ್ನೆಲೆ | ಮಾಣಿ – ಕಲ್ಲಡ್ಕ ಹೆದ್ದಾರಿ ಬ್ಲಾಕ್ ➤ ಪರಿಸರದಲ್ಲಿ ಬೆಂಕಿ ಉರಿಸದಂತೆ ಸೂಚನೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.02. ಚಾಲಕನ ನಿಯಂತ್ರಣ ತಪ್ಪಿದ ಬುಲೆಟ್ ಟ್ಯಾಂಕರೊಂದು ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಸೂರಿಕುಮೇರು ಮಸೀದಿಯ ಸಮೀಪದ ತಿರುವಿನಲ್ಲಿ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ಘಟನೆಯಿಂದ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ‌. ಅನಿಲ ಸೋರಿಕೆ ನಿಯಂತ್ರಣ ತಂಡ ಹಾಗೂ ಅಗ್ನಿಶಾಮಕ ದಳ, ಪೊಲೀಸರು ಸ್ತಳಕ್ಕಾಗಮಿಸಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪರಿಸರದ ಮನೆಗಳಲ್ಲಿ ಬೆಂಕಿ ಉರಿಸದಂತೆ ಸೂರಿಕುಮೇರ್ ಮಸೀದಿಯ ಧ್ವನಿವರ್ಧಕದಲ್ಲಿ ಸೂಚನೆ ನೀಡಲಾಗಿದೆ.

Also Read  ನಾಳೆ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ➤ ಯಾರೂ ಮನೆಯಿಂದ ಹೊರಬರದಂತೆ ಜಿಲ್ಲಾಧಿಕಾರಿ ಆದೇಶ

 

error: Content is protected !!
Scroll to Top