ಬೆಳ್ತಂಗಡಿ: ವೃದ್ದೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಮಕ್ಕಳು..! ➤ ಮಗ ಪೊಲೀಸ್ ಆದರೂ ತಾಯಿಯ ಸ್ಥಿತಿ ಶೋಚನೀಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 01. ವೃದ್ಧೆ ತಾಯಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಕರಾಳ ಘಟನೆ ಬೆಳ್ತಂಗಡಿಯ ಕಳಿಯದ ನಾಳ ಎಂಬಲ್ಲಿ ನಡೆದಿದೆ.

ವೃದ್ಧ ತಾಯಿಗೆ 5 ಜನ ಮಕ್ಕಳಿದ್ದು, ಇದರ ಪೈಕಿ ಒಬ್ಬ ಪುತ್ರಿ ಆಶಾ ಕಾರ್ಯಕರ್ತೆಯಾಗಿದ್ದು, ಮತ್ತೋರ್ವ ಪುತ್ರಿ ಗೃಹಿಣಿಯಾಗಿದ್ದಾರೆ. ಒಬ್ಬ ಪುತ್ರ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇನ್ನಿಬ್ಬರು ಪುತ್ರರು ಖಾಸಗಿಯಾಗಿ ಕೆಲಸ ಮಾಡುತ್ತಿದ್ದಾರೆ. ಮತ್ತೋರ್ವ ಪೊಲೀಸ್ ಸಿಬ್ಬಂದಿಯಾಗಿ ಸೇವೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ. ಬೀದಿ ಬದಿಯಲ್ಲಿದ್ದ ಈ ವೃದ್ದೆಯನ್ನು ಗಮನಿಸಿದ ಸಾರ್ವಜನಿಕರು ದ.ಕ. ಜಿಲ್ಲಾ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ತಕ್ಷಣವೇ ತುರ್ತು ಸ್ಪಂದನಾ ವಾಹನ ಸ್ಥಳಕ್ಕೆ ತೆರಳಿ ವೃದ್ಧೆಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ವೃದ್ಧ ತಾಯಿಯನ್ನು ಅವರ ಪುತ್ರಿಯ ಮನೆಗೆ ಕಳುಹಿಸಲಾಗಿದೆ. ಈ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

Also Read  ದ.ಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪತ್ತೆ...!! ➤ ವಿದೇಶದಿಂದ ಬಂದ ವ್ಯಕ್ತಿಗೆ ಕೋವಿಡ್ ದೃಢ

error: Content is protected !!
Scroll to Top