ವಿದ್ಯಾರ್ಥಿ ನಿಲಯಗಳ ಪ್ರವೇಶ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು www.backwardclasses.kar.nic.in ಅಥವಾ http/karepass.cgg.gov.in ನಲ್ಲಿ ಫೆಬ್ರವರಿ 10 ರೊಳಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉರ್ವಸ್ಟೋರ್, ರೇಡಿಯೋ ಪಾರ್ಕ್, ಮಂಗಳೂರು ದೂ. ಸಂಖ್ಯೆ: 0824-2453650 ನ್ನು ಸಂಪರ್ಕಿಸುವಂತೆ  ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

error: Content is protected !!
Scroll to Top