ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 02. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ  ಪ್ರಸ್ತುತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‍-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕೊನೆಯ ದಿನ. ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ www.bcwd.karnataka.gov.in ಅಥವಾ ಇ-ಮೇಲ್ bcwd.hostels@karnataka.gov.in ನಲ್ಲಿ ಸಲ್ಲಿಸಬಹುದು.

Also Read  ಜಿಲ್ಲಾ ಆಯುಷ್ ಇಲಾಖೆ ಹಾಗೂ ಆಯುಷ್ ಫೌಂಡೇಶನ್ ದ. ಕ ಇವರ ವತಿಯಿಂದ ➤ ಡೆಂಗಿ ನಿಯಂತ್ರಣ: ಆಯುಷ್ ವೈದ್ಯರಿಗೆ ತರಬೇತಿ

 

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಯವರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರಸ್ತೆ, ಬಿಜೈ-ಕಾಪಿಕಾಡ್, ಮಂಗಳೂರು-4,  ಅಥವಾ ಸಹಾಯವಾಣಿ ಸಂಖ್ಯೆ: 080-8050370006 ಸಂಪರ್ಕಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top