ಮಂಗಳೂರು, ಬೆಂಗಳೂರು ಸೇರಿದಂತೆ ರಾಜ್ಯದ ಏಳು ಕಡೆಗಳಲ್ಲಿ ಎಸಿಬಿ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 02. ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ಬೆಂಗಳೂರು, ಮಂಗಳೂರು ಸೇರಿದಂತೆ ಏಳು ಅಧಿಕಾರಿಗಳ ಮನೆ ಹಾಗೂ ಕಛೇರಿ ಮೇಲೆ ದಾಳಿ ನಡೆಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ಜಂಟಿ ನಿರ್ದೇಶಕ ಕೆ.ವಿ.ಜಯರಾಜ್, ಬೆಂಗಳೂರಿನ ಸಹಕಾರ ಇಲಾಖೆ ಜಂಟಿ ರಿಜಿಸ್ಟ್ರಾರ್ ಪಾಂಡುರಂಗ ಗರಗ, ಕೊಪ್ಪಳ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಧಾರವಾಡದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸ್, ಧಾರವಾಡದ ಸಣ್ಣ ನೀರಾವರಿ ಇಲಾಖೆಯ ಎಕ್ಸಿಕ್ಯುಟಿವ್ ಇಂಜಿನಿಯರ್ ದೇವರಾಜ್ ಕಲ್ಲೇಶ್, ಲೋಕೋಪಯೋಗಿ ಇಲಾಖೆಯ ಮಾಗಡಿ ಉಪವಿಭಾಗದ ಕಿರಿಯ ಇಂಜಿನಿಯರ್ ಚನ್ನಬಸಪ್ಪ, ಕೋಲಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್.ವಿಜಯಕುಮಾರ್ ಎಂಬವರ ಮನೆ ಹಾಗೂ ಕಛೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಈ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಸಿರುವ ಮಾಹಿತಿಯನ್ನಾಧರಿಸಿ ಈ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Also Read  ಕೊರೋನಾ 3ನೇ ಅಲೆ ಎದುರಿಸಲು ಮಕ್ಕಳಿಗಾಗಿ ವಿಶೇಷ ವಾರ್ಡ್ ಗಳ ರಚನೆ

error: Content is protected !!
Scroll to Top