ಫೆ. 06 ರಂದು ಇಂಟರ್ನೆಟ್ ನಿಷೇಧ ವಿರೋಧಿಸಿ ರಸ್ತೆ ಬಂದ್ ಗೆ ರೈತ ಸಂಘಟನೆ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 02. ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಮಸೂದೆಯ ವಿರುದ್ದ ರೈತರು ಪ್ರತಿಭಟನೆಯಲ್ಲಿ ನಿರತರಾಗಿರುವ ಸ್ಥಳೀಯ ಪ್ರದೇಶಗಳಲ್ಲಿ ಇಂಟರ್ನೆಟ್ ನಿಷೇಧ ಹಾಗೂ ಅಧಿಕಾರಿಗಳು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರೈತ ಸಂಘಟನೆಗಳು, ದೇಶಾದ್ಯಂತ ರಸ್ತೆ ಬಂದ್ ಘೋಷಿಸಿವೆ.

ಈ ಕುರಿತು ಇಂಟರ್ನೆಟ್ ನಿಷೇಧವನ್ನು ವಿರೋಧಿಸಿ ಫೆಬ್ರುವರಿ 6 ರಂದು ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರ ತನಕ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಲಾಗುದು ಎಂದು ರೈತ ಮುಖಂಡರು ಮಾತನಾಡಿದರು. ಇನ್ನು ಬಜೆಟ್ ಮಂಡನೆಯಲ್ಲಿ ರೈತರನ್ನು ನಿರ್ಲಕ್ಷಿಸಲಾಗಿದೆ. ಅಲ್ಲದೇ ನೀರು ಮತ್ತು ವಿದ್ಯುತ್ ಸರಬರಾಜನ್ನು ಮೊಟಕುಗೊಳಿಸಲಾಗಿದೆ ಮತ್ತು ಪ್ರತಿಭಟನಾ ಸ್ಥಳಗಳಲ್ಲಿ ಮೊಬೈಲ್ ಟಾಯ್ಲೆಟ್ ಬ್ಲಾಕ್‍ ಗಳನ್ನು ತೆಗೆದುಹಾಕಲಾಗಿದೆ ಎಂದು ದೂರಿದ್ದಾರೆ.

Also Read  ಕಡಬ: ಚರಂಡಿಗೆ ಬಿದ್ದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

error: Content is protected !!
Scroll to Top