Breaking | ಕಡಬ: ನಾಯಿಯನ್ನು ಅಟ್ಟಿಸಿಕೊಂಡು ಶೌಚಾಲಯಕ್ಕೆ ನುಗ್ಗಿದ ಚಿರತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಬುಧವಾರ ಬೆಳಿಗ್ಗೆ ಕಡಬದ ಕೈಕಂಬದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದೆ. ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದು, ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿದೆ. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ಇದೀಗ ನಾಯಿ ಮತ್ತು ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದೆ. ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಇನ್ನಷ್ಟೇ ಕಾರ್ಯಾಚರಣೆ ನಡೆಯಬೇಕಿದೆ.

 

error: Content is protected !!

Join the Group

Join WhatsApp Group