ಮಹಿಳೆಯ ಅತ್ಯಾಚಾರವೆಸಗಿ ಉಸಿರುಗಟ್ಟಿಸಿ ಕೊಲೆಗೈದ ಕಿರಾತಕರು

(ನ್ಯೂಸ್ ಕಡಬ) newskadaba.com ಮಂಡ್ಯ, ಫೆ. 03. ಗೃಹಿಣಿಯೋರ್ವರ ಕೈಕಾಲು ಕಟ್ಟಿ ಅತ್ಯಾಚಾರ ನಡೆಸಿದ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ನಡೆದಿದೆ.

ಮದ್ದೂರು ಪಟ್ಟಣದ 39 ವರ್ಷದ ಮಹಿಳೆ ಕೊಲೆಯಾಗಿದ್ದು, ಮಹಿಳೆಯ ಪತಿ ಅಡುಗೆ ಭಟ್ಟರಾಗಿ ಕೆಲಸ ಮಾಡುತ್ತಿದ್ದರು. ಇವರು ಪತಿ ಜತೆ ಕಳೆದ ಆರು ತಿಂಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದರೆನ್ನಲಾಗಿದೆ. ಘಟನೆಯಿಂದ ಅಕ್ಕ-ಪಕ್ಕದ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಈ ಕುರಿತು ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.

Scroll to Top