ಕನ್ನಡ ಪುಸ್ತಕ ಸೊಗಸು-2020 ಬಹುಮಾನಕ್ಕೆಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020 ರ ಜನವರಿ ಯಿಂದ ಡಿಸೆಂಬರ್ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ಕನ್ನಡ ಪುಸ್ತಕ ಸೊಗಸು-2020 ಬಹುಮಾನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು  ಫೆಬ್ರವರಿ 20 ರೊಳಗೆ ಸ್ವಯಂ ಅರ್ಜಿಯನ್ನು  ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ www.kannadapustakapradhikara.com ದೂ.ಸಂಖ್ಯೆ: 080-22484516/ 22107704 ನ್ನು ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ತೂಫಾನ್ - ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ

error: Content is protected !!
Scroll to Top