ಕಡಬ: ಫೆ. 23ರಂದು ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಫೆಬ್ರವರಿ ತಿಂಗಳಲ್ಲಿ ದ.ಕ ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳಲ್ಲಿ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳನ್ನು  ಆಯೋಜಿಸಲಾಗಿದೆ.


ಫೆಬ್ರವರಿ 5 ರಂದು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ, 6 ರಂದು ಪುತ್ತೂರಿನ ಸಾರ್ವಜನಿಕ ಆಸ್ಪತ್ರೆ, 10 ರಂದು  ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ, 12 ರಂದು ಬೆಳ್ತಂಗಡಿಯ ತಾಲೂಕು ಆಸ್ಪತ್ರೆ ಹಾಗೂ ಸುಳ್ಯದ ಸಾರ್ವಜನಿಕ ಆಸ್ಪತ್ರೆ, 16 ರಂದು ವಿಟ್ಲದ ಪ್ರಾಥಮಿಕ ಆರೋಗ್ಯ ಕೇಂದ್ರ, 17 ರಂದು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ, 23 ರಂದು ಉಳ್ಳಾಲದ ನಗರ ಸರ್ಕಾರಿ ಆರೋಗ್ಯ ಕೇಂದ್ರ ಹಾಗೂ ಕಡಬದ ಸರ್ಕಾರಿ ಆರೋಗ್ಯ ಕೇಂದ್ರ, 24 ರಂದು ಪುತ್ತೂರಿನ ಸಾರ್ವಜನಿಕ ಆಸ್ಪತ್ರೆ ಹಾಗೂ ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ, 26 ರಂದು ಮೂಡಬಿದ್ರೆಯ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಶಿಬಿರ ನಡೆಯಲಿದೆ ಎಂದು ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ತಲೆ ಮೇಲೆ ಕಲ್ಲು ಹಾಕಿ ► ಸ್ನೇಹಿತನ ಹತ್ಯೆ

error: Content is protected !!
Scroll to Top