ಮಂಗಳೂರು: ವಿಶ್ವವಿದ್ಯಾನಿಲಯದ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವ ಮಾರ್ಚ್‍ನಲ್ಲಿ ಜರಗಲಿದೆ. ಘಟಿಕೋತ್ಸವಕ್ಕೆ ಪ್ರವೇಶ ಪಡೆಯಲು ಅರ್ಹರಲ್ಲದ (2020 ಸೆ.30ರೊಳಗೆ) ವಿವಿಧ ಪದವಿಗಳನ್ನು ಪಡೆಯಲು ಅರ್ಹರಾದ ಅಭ್ಯರ್ಥಿಗಳು ಗೈರು ಹಾಜರಿಯಲ್ಲಿಯೇ ಪದವಿ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಬಹುದು. ಸ್ವಾಯತ್ತ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಪದವಿ ಪಡೆಯಲು ಅರ್ಹರಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರ ಮುಖಾಂತರ ಸಲ್ಲಿಸಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ಮಾ.4ರೊಳಗೆ ಕುಲಸಚಿವರು,(ಪರೀಕ್ಷಾಂಗ) ಮಂಗಳೂರು ವಿ.ವಿ. ಮಂಗಳಗಂಗೋತ್ರಿ -574199 ಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ www.mangaloreuniversity.ac.in ಸಂಪರ್ಕಿಸಬಹುದುಎಂದು ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

Also Read  ಮರಳು ಸಾಗಾಟ ಪ್ರಕರಣ - ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

error: Content is protected !!
Scroll to Top