ಕಡಬ: ‘ಆಪರೇಷನ್ ಚೀತಾ’ ಕಾರ್ಯಾಚರಣೆ ವಿಫಲ ➤ ಕಾರ್ಯಾಚರಣೆ ವೇಳೆ ಕಾಡಿನತ್ತ ಓಡಿ ತಪ್ಪಿಸಿಕೊಂಡ ಚಿರತೆ

(ನ್ಯೂಸ್ ಕಡಬ) newskadaba.com ಕಡಬ, ಫೆ.03. ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದು ಮನೆಯ ಶೌಚಾಲಯದಲ್ಲಿ ಬಂಧಿಯಾಗಿದ್ದ ಚಿರತೆಯು ಕಾರ್ಯಾಚರಣೆ ವೇಳೆ ಓಡಿ ತಪ್ಪಿಸಿಕೊಂಡಿದೆ.

ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು ಬಂದಿದ್ದು, ಚಿರತೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕುನಾಯಿಯು ಮನೆಯ ಹೊರಗಿದ್ದ ಶೌಚಾಲಯಕ್ಕೆ ಹೊಕ್ಕಿದ್ದರಿಂದ ಚಿರತೆಯು ನಾಯಿಯನ್ನು ಹಿಂಬಾಲಿಸಿ ಶೌಚಾಲಯದ ಒಳಗೆ ಬಂದಿತ್ತು. ಇದನ್ನು ಗಮನಿಸಿದ ಮನೆಯವರು ಹೊರಗಿನಿಂದ ಶೌಚಾಲಯದ ಬಾಗಿಲನ್ನು ಹಾಕಿದ್ದು, ನಾಯಿ ಮತ್ತು ಚಿರತೆ ಎರಡೂ ಶೌಚಾಲಯದ ಒಳಗೆ ಬಂಧಿಯಾಗಿದ್ದವು. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾ ಅಧಿಕಾರಿಗಳು ಚಿರತೆಯನ್ನು ಹಿಡಿಯುವ ಕಾರ್ಯಾಚರಣೆಯ ವೇಳೆ ಚಿರತೆಯು ತಪ್ಪಿಸಿಕೊಂಡು ಕಾಡಿನತ್ತ ಓಡಿ ಪರಾರಿಯಾಗಿದೆ.

Also Read  ಪೆರ್ನೆ: ಚರಂಡಿಗೆ ಇಳಿದ ಕುಕ್ಕೆ ಸುಬ್ರಹ್ಮಣ್ಯ - ಗೋಕರ್ಣ ಎಕ್ಸ್‌ಪ್ರೆಸ್ ಬಸ್

 

error: Content is protected !!
Scroll to Top