(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ.03. ಗ್ಯಾಸ್ ಟ್ಯಾಂಕರ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಂಟೈನರ್ ಲಾರಿ ನಡುವೆ ಕಲ್ಲಡ್ಕ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ಲಾರಿಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮಂಗಳವಾರವಷ್ಟೇ ಸೂರಿಕುಮೇರು ಎಂಬಲ್ಲಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಪಲ್ಟಿ ಹೊಡೆದು ರಸ್ತೆ ತಡೆ ಉಂಟಾಗಿತ್ತು.