ಸಿಎಂ ಕಾರ್ಯಕ್ರಮದಲ್ಲಿ ಬಿರಿಯಾನಿ ಸೇವಿಸಿದ 145 ಮಂದಿ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಅಸ್ಸಾಂ, ಫೆ. 04. ಅಸ್ಸಾಂನ ಸಿಎಂ ಭಾಗವಹಿಸಿದ್ದರೆನ್ನಲಾದ ಕಾರ್ಯಕ್ರಮವೊಂದರಲ್ಲಿ ಬಿರಿಯಾನಿ ಸೇವಿಸಿದ ಸಚಿವರು ಸೇರಿದಂತೆ 145 ಜನರು ಅಸ್ವಸ್ಥರಾಗಿರುವ ಘಟನೆ ಅಸ್ಸಾಮಿನ ಕರ್ಬಿ ಅಂಗ್ಲಾಂಗ್ ಜಿಲ್ಲೆಯಲ್ಲಿ ನಡೆದಿದೆ.

ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಕೋರ್ಸ್ ನ ಶೈಕ್ಷಣಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ 145 ಮಂದಿ ಗುವಾಹಟಿಯ ಆಸ್ಪತ್ರೆಗೆ ದಾಖಲಾಗಿದ್ದಾರೆನ್ನಲಾಗಿದೆ. ಕಾರ್ಯಕ್ರಮದಲ್ಲಿ ಪ್ಯಾಕ್ ಮಾಡಲಾಗಿದ್ದ ಬಿರಿಯಾನಿಯನ್ನು ಹಂಚಲಾಗಿತ್ತು. ಒಟ್ಟು 8 ಸಾವಿರ ಜನರಿಗೆ ಇದೇ ಆಹಾರವನ್ನು ಹಂಚಲಾಗಿದೆ ಎಂದು ತಿಳಿದು ಬಂದಿದೆ. ಆಹಾರ ಸೇವಿಸಿದ ಬಳಿಕ ಹಲವರು ಅಸ್ವಸ್ಥರಾಗಿದ್ದಾರೆ. ಒಟ್ಟು 145 ಜನರ ಪೈಕಿ 28 ಮಂದಿ ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ.

Also Read  9 ಮಂದಿಯ ಹತ್ಯೆ ಮಾಡಿದ "ಟ್ವಿಟರ್ ಹಂತಕನಿ"ಗೆ ಮರಣದಂಡನೆ

error: Content is protected !!
Scroll to Top