ಉಪ್ಪಿನಂಗಡಿ: ಅಕ್ರಮ ಮರಳುಗಾರಿಕೆಗೆ ಅಧಿಕಾರಿಗಳ ದಾಳಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 04. ಇಲ್ಲಿನ ಪೆರ್ನೆ ಸಮೀಪ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿ, ಅಕ್ರಮ ಮರಳುಗಾರಿಕೆಯನ್ನು ಪತ್ತೆ ಹಚ್ಚಲಾಗಿದೆ.

ಪೆರ್ನೆ ಗ್ರಾಮದ ಕಳೆಂಜ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮ ಮರಳು ಸಂಗ್ರಹದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹದೇಶ್ವರ ಮತ್ತು ಅಧಿಕಾರಿಗಳ ತಂಡ ದಾಳಿ ನಡೆಸುವ ಅಕ್ರಮವಾಗಿ ದೋಣಿಯ ಮೂಲಕ ಮರಳು ಸಂಗ್ರಹಿಸಿ ನದಿ ದಡದಲ್ಲಿ ರಾಶಿ ಹಾಕಿರುವುದನ್ನು ಪತ್ತೆ ಹಚ್ಚಿ ಮರಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೆ, ನದಿ ದಡದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಅನ್ನು ಕೂಡಾ ತೆರವುಗೊಳಿಸಿದೆ. ಪೆರ್ನೆ ಗ್ರಾಮದ ಬಿಳಿಯೂರಿನಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಲಾಗಿತ್ತಾದರೂ ಪೆರ್ನೆಯಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಿರಲಿಲ್ಲ. ಆದರೆ ಅಲ್ಲಿ ಹನೀಫ್ ಎಂಬಾತ ಅಕ್ರಮವಾಗಿ ಮರಳು ತೆಗೆದು ದಾಸ್ತಾನು ಇರಿಸಿದ್ದು, ಕಂಡು ಬಂದಿದೆ. ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಹಿರಿಯ ಅಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಭೂವಿಜ್ಞಾನಿ ಮಹದೇಶ್ವರ  ತಿಳಿಸಿದ್ದಾರೆ.

Also Read  ಮರಳು ಸಾಗಾಟದ ಲಾರಿ ಢಿಕ್ಕಿ ► ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top