(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಕೇಂದ್ರ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ 3 ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್ ಗ್ರೂಪ್ಸ್‌ಗೆ ಗುತ್ತಿಗೆಗೆ ನೀಡಿದ್ದು, ಇದನ್ನು ಪ್ರಶ್ನಿಸಿ ಮತ್ತು 2019 ರಲ್ಲಿ ಸಂಸತ್ ಈ ಕುರಿತು ತೆಗೆದುಕೊಂಡ ನಿರ್ಧಾರವನ್ನು ರದ್ದುಗೊಳಿಸುವಂತೆ ಕೋರಿ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರ ನೌಕರರ ಒಕ್ಕೂಟ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಇದನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರ ವಿಭಾಗೀಯ ಪೀಠ ಕೇಂದ್ರಕ್ಕೆ ನೋಟಿಸ್ ನೀಡಿದೆ.