(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 04. ಕಡು ನೀಲಿ ಬಣ್ಣದ ತಿಮಿಂಗಿಲ ಮಾದರಿಯ ಬೃಹತ್ ಕಡಲು ಹಂದಿಯು ಉಳ್ಳಾಲ ಮೊಗವೀರ ಪಟ್ಣದ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.
ತಿಮಿಂಗಿಲದ್ದೇ ಒಂದು ಪ್ರಭೇದವಾಗಿರುವ ಈ ಕಡಲಂದಿಗಳು ಸಾಧಾರಣವಾಗಿ ತಿಮಿಂಗಿಲಗಳನ್ನೇ ಹೋಲುತ್ತಿದ್ದು, ಆಡು ಭಾಷೆಯಲ್ಲಿ ಕಡಲು ಹಂದಿ ಎಂದು ಕರೆಯುತ್ತಾರೆ.