ಕನ್ನಡ ಪುಸ್ತಕ ಸೊಗಸು-2020 ಬಹುಮಾನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 04. ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020 ರ ಜನವರಿಯಿಂದ ಡಿಸೆಂಬರ್ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ “ಕನ್ನಡ ಪುಸ್ತಕ ಸೊಗಸು-2020” ಬಹುಮಾನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು  ಇಲಾಖೆಯ ವೆಬ್‍-ಸೈಟ್ www.dkc.mangaluru.com ನಲ್ಲಿ ಫೆಬ್ರವರಿ 20 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ  ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ತುಳು ಭವನ, ಉರ್ವಸ್ಟೋರ್, ಅಶೋಕ ನಗರ, ಮಂಗಳೂರು ದ.ಕ.ಜಿಲ್ಲೆ, ದೂ. ಸಂಖ್ಯೆ:0824-2951327 ನ್ನು ಸಂಪರ್ಕಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Also Read  ಕಡಬ: ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ

error: Content is protected !!
Scroll to Top