ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತ್ಯು



(ನ್ಯೂಸ್ ಕಡಬ) newskadaba.com ಕೋಲಾರ, ಫೆ. 04. ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಕೆರೆಯಲ್ಲಿ ಮುಳುಗಿ ದಾರುಣವಾಗಿ ಮೃತಪಟ್ಟ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.






ಮೃತರನ್ನು ರುಕ್ಮಿಣಿ ಬಾಯ್(35) ಹಾಗೂ ಇವರ ಪುತ್ರಿಯರಾದ ಆರತಿ(6), ಕೀರ್ತಿ(5) ಹಾಗೂ ರುಕ್ಮಿಣಿ ಅವರ ತಂಗಿ ರಾಜೇಶ್ವರಿ(30) ಎಂದು ಗುರುತಿಸಲಾಗಿದೆ. ಕೆರೆಯ ಬಳಿ ಬಟ್ಟೆ ತೊಳೆಯುತ್ತಿದ್ದ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ಮಕ್ಕಳು ನೀರಿಗೆ ಇಳಿದಿದ್ದು, ಈ ಸಂದರ್ಭ ಮುಳುಗಿ ಹೋಗಿದ್ದಾರೆ. ಮಕ್ಕಳನ್ನು ರಕ್ಷಿಸಲೆಂದು ತಮ್ಮ ಜೀವದ ಹಂಗು ತೊರೆದು ತಾಯಿ ಹಾಗೂ ಚಿಕ್ಕಮ್ಮ ನೀರಿಗೆ ಹಾರಿದ್ದು, ಆದರೆ ಮೇಲೆ ಬರಲು ಸಾಧ್ಯವಾಗದೇ ಅವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕುಪ್ಪಂ ಠಾಣೆ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top