ಉಪ್ಪಿನಂಗಡಿ: ಬೈಕ್ – ಸಿಮೆಂಟ್ ಮಿಕ್ಸರ್ ಲಾರಿ ನಡುವೆ ಢಿಕ್ಕಿ ➤ ಮಹಿಳೆ ಮೃತ್ಯು



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.05. ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಬೈಕ್ ನಡುವೆ ಢಿಕ್ಕಿ ಸಂಬಂಧಿಸಿದ ಪರಿಣಾಮ ಸಹ ಸವಾರೆಯೋರ್ವರು ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ಶುಕ್ರವಾರದಂದು ನಡೆದಿದೆ.





ಮೃತ ಮಹಿಳೆಯನ್ನು ಸರಳಿಕಟ್ಟೆ ನಿವಾಸಿ ರಫೀಕ್ ಎಂಬವರ ಪತ್ನಿ ಸಕೀನಾ ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ನಿಂದ ನೆಲ್ಯಾಡಿ ಕಡೆಗೆ ತೆರಳುತ್ತಿದ್ದ ಸಿಮೆಂಟ್ ಮಿಕ್ಸರ್ ವಾಹನ ಹಾಗೂ ಬೈಕ್‌ ಮಧ್ಯೆ ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿ ಢಿಕಯಾಗಿ ಈ ಸಂಭವಿಸಿದೆ. ಘಟನೆಯಲ್ಲಿ ಸವಾರ ರಫೀಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






 

error: Content is protected !!
Scroll to Top