ಕೊಣಾಜೆ: ಮರಕ್ಕೆ ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೊಣಾಜೆ, ಫೆ. 05. ಅವಿವಾಹಿತ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ‌ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವನನ್ನು ನೆತ್ತಿಲಪದವು ಸೈಟ್ ನಿವಾಸಿ ರಕ್ಷಿತ್ ಸನಿಲ್(22) ಎಂದು ಗುರುತಿಸಲಾಗಿದೆ. ಈತನ ಮೃತದೇಹವು ನರಿಂಗಾನ ಗ್ರಾಮದ ಕೊಲ್ಲರಕೋಡಿ ಶಾಲಾ ಮೈದಾನದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶುಕ್ರವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಹೇಳಲಾಗುತ್ತಿದೆ. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top