ಮಂಗಳೂರು, ಕೊಣಾಜೆ ಹಾಗೂ ಉಳ್ಳಾಲ‌ ಸೇರಿದಂತೆ‌ ಹಲವು ದೇವಾಲಯಗಳ ಕಳ್ಳತನ‌ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 05. ದೇವಸ್ಥಾನಗಳ ಕಾಣಿಕೆ ಹುಂಡಿಯನ್ನು ಕದ್ದು ದುಷ್ಕೃತ್ಯವೆಸಗುತ್ತಿದ್ದ ದುಷ್ಕರ್ಮಿಗಳನ್ನು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಮೊಹಮ್ಮದ್ ಸುಹೈಲ್ ಹಾಗೂ ಸಿರಾಜುದ್ದೀನ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಮಂಗಳೂರಿನ ಹಲವು ಕಡೆಗಳಲ್ಲಿ ಕೊರಗಜ್ಜ ಸ್ವಾಮಿ ದೈವಸ್ಥಾನ, ಅಯ್ಯಪ್ಪಸ್ವಾಮಿ ದೇವಸ್ಥಾನ ಸೇರಿದಂತೆ ಮಂಗಳೂರು, ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ದೇವಾಲಯಗಳಲ್ಲಿ ಕಳ್ಳತನ ನಡೆದಿತ್ತು. ಅಲ್ಲದೇ ಆರೋಪಿಗಳು ಕಾಣಿಕೆ ಹುಂಡಿಯನ್ನು ಕದ್ದ ಬಳಿಕ ಕಾಣಿಕೆ ಹುಂಡಿಗೆ ಬಳಸಿದ ಕಾಂಡೋಮ್ ಹಾಕುತ್ತಿದ್ದರಲ್ಲದೇ ಮಲ, ಮೂತ್ರ ವಿಸರ್ಜನೆ ಮಾಡಿ ಪರಾರಿಯಾಗುತ್ತಿದ್ದರು. ಈ ಕೃತ್ಯದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Also Read  ಕಡಬಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ► ಪದವಿ ಕಾಲೇಜು ಆರಂಭಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ

error: Content is protected !!
Scroll to Top