ಕಾರು – ಮೀನಿನ ಲಾರಿ ನಡುವೆ ಅಪಘಾತ ➤ ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಗೆ ಗಾಯ



(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.06. ಲಾರಿ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರು ಗಾಯಗೊಂಡ ಘಟನೆ ಶನಿವಾರ ಬೆಳಗಿನ ಜಾವ ನಂತೂರಿನಲ್ಲಿ ನಡೆದಿದೆ.





ದಯಾನಂದ ಕತ್ತಲ್ ಸಾರ್ ಅವರು ತನ್ನ ಕಾರಿನಲ್ಲಿ ನಗರದಿಂದ ನಂತೂರು ಕಡೆಗೆ ತೆರಳುತ್ತಿದ್ದ ವೇಳೆ ನಂತೂರು ಜಂಕ್ಷನ್ ಬಳಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮೀನಿನ ಲಾರಿ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ದಯಾನಂದ ಕತ್ತಲ್ ಸಾರ್ ಅವರ ತಲೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.






 

error: Content is protected !!
Scroll to Top