ಉದ್ಯಮ ನೋಂದಣಿ ಪ್ರಮಾಣ ಪತ್ರ – ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಕೈಗಾರಿಕಾ ಘಟಕಗಳ ಎಲ್ಲಾ ಕೈಗಾರಿಕೋದ್ಯಮಿಗಳು ಹೊಸದಾಗಿ ಉದ್ಯಮ ನೋಂದಣಿಯನ್ನು  ಪ್ರಸ್ತುತ ಸಾಲಿನ ಮಾರ್ಚ್ 31 ರೊಳಗೆ ಮಾಡಕೊಳ್ಳಬಹುದಾಗಿದೆ.


ಉದ್ಯಮ ನೋಂದಣಿ ಪ್ರಮಾಣ ಪತ್ರವನ್ನು ವೆಬ್‍ಸೈಟ್ https://udyamregistration.gov.in ನಿಂದ ಪಡೆಯಲು ಯಾವುದೇ ಶುಲ್ಕ ಇರುವುದಿಲ್ಲ.  ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ಯಾಡಿ ಕೈಗಾರಿಕಾ ವಸಾಹತು ಮಂಗಳೂರು- 575 008 ಅಥವಾ ದೂರವಾಣಿ ಸಂಖ್ಯೆ: 0824-2214021 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  Регистрация в казино — Демо слоты бесплатно, демо слоты казино

error: Content is protected !!
Scroll to Top