ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು 2020 ರಿಂದ 2023 ರವರೆಗೆ (3 ವರ್ಷ) ಸದಸ್ಯತ್ವಕ್ಕಾಗಿ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಸಿಡಬ್ಲ್ಯೂಸಿ ಹಾಗೂ ಜೆಜೆಬಿಗಳಿಗೆ ಪ್ರತ್ಯೇಕ ಅರ್ಜಿ ನಮೂನೆಗಳು  ಸೂಚನೆಗಳು, ಅಫಿದವಿಟ್‍ಗಳು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ರಲ್ಲಿ ಲಭ್ಯವಿರುತ್ತದೆ. ಅರ್ಜಿ ನಮೂನೆ ಹಾಗೂ  ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮೂರನೇ ಮಹಡಿ, ವಿಶ್ವೇಶ್ವರಯ್ಯ ಮಿನಿ ಗೋಪುರ,  ಡಾ.ಬಿ.ಆರ್ ಅಂಬೇಡ್ಕರ್ ವೀದಿ, ಬೆಂಗಳೂರು 560001, ದೂ.ಸಂಖ್ಯೆ:080-22879382/83  ಅಥವಾ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದ.ಕ ಜಿಲ್ಲೆ, ದೂ. ಸಂಖ್ಯೆ: 0824-2440004 ನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಆದೇಶ ಪಾಲಿಸದ ಇನ್ಸ್‌ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

error: Content is protected !!
Scroll to Top