ಫೆ. 07ರಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರವರು ಫೆಬ್ರವರಿ 7 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಫೆಬ್ರವರಿ 7 ರಂದು ಬೆಳಿಗ್ಗೆ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ  ಆಗಮಿಸಿ 10.30ಕ್ಕೆ  ಧರ್ಮಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. 11.45 ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ ಚತುಷ್ದಥ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 12.15 ಕ್ಕೆ ಬೆಳ್ತಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯ ಪರಿವೀಕ್ಷಣಾ ಮಂದಿರದ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.15 ಗಂಟೆಗೆ ಮರವೂರು-ಮಂಗಳೂರು ತಾಲೂಕಿನ-ಮಂಗಳೂರು-ಅತ್ರಾಡಿ ರಾಜ್ಯ ಹೆದ್ದಾರಿ ನಂ.67ರ ರಸ್ತೆ ಕಿ.ಮೀ 12.98 ರಿಂದ 14.80 ಕಿ.ಮೀ ವರೆಗೆ ಚತುಷ್ಟದ ರಸ್ತೆ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 7.35 ಕ್ಕೆ ಮಂಗಳೂರಿನಿಂದ  ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Also Read  ಕರಾವಳಿಯಲ್ಲಿ ಮುಂದುವರಿದ ಮುಂಗಾರು ಹಿನ್ನೆಲೆ ➤ ಪ್ರಾಕೃತಿಕ ವಿಕೋಪ ಉಂಟಾದಲ್ಲಿ ಪೊಲೀಸ್ ಸಹಾಯವಾಣಿ ಸಂಪರ್ಕಿಸಲು ದ.ಕ ಜಿಲ್ಲಾ ಪೊಲೀಸ್ ಮನವಿ

 

error: Content is protected !!
Scroll to Top