ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್…! ➤ ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 06. ರಾಜ್ಯದಾದ್ಯಂತ ರೈತರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಸ್ತೆ ತಡೆಯುವ ಮೂಲಕ ಚಕ್ಕಾ ಜಾಮ್ ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ಗೇಟ್ ಬಳಿ ರೈತ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ, ಪ್ರಾಂತ ರೈತ ಸಂಘಟನೆ, ಹಸಿರು ಸೇನೆ, ಎಐಡಿಎಸ್.ಒ, ಸಿಇಟಿಯು, ಎಐಕೆಕೆಎಂ.ಎಸ್, ಅಖಿಲ ಭಾರತ ಕಿಸಾನ್ ಹಾಗೂ ಮತ್ತಿತರ ಸಂಘಟನೆಗಳು ಭಾಗವಹಿಸಿದ್ದವು.

error: Content is protected !!

Join the Group

Join WhatsApp Group