(ನ್ಯೂಸ್ ಕಡಬ) newskadaba.com ಬಿಳಿನೆಲೆ, ಫೆ. 06. ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಮುಖ್ಯ ಶಿಕ್ಷಕ ಹಿರಿಯಣ್ಣ ಗೌಡ ಅಮೈ ಅವರಿಗೆ ಬೀಳ್ಕೊಡುಗೆ ಸಮಾರಂಭವು ಇಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಇವರನ್ನು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಸನ್ಮಾನಿಸಿ, ಆಶೀರ್ವದಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಡಬ ಸಮಿತಿಯ ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅಭಿನಂದನಾ ಭಾಷಣ ಮಾಡಿದರು. ಈ ಸಂದರ್ಭ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಬೈಲು, ಎಸ್.ಡಿ.ಎಂ.ಸಿ ಅಧ್ಯಕ್ಷ ಗಿರೀಶ್ ಕಳಿಗೆ, ವೇದವ್ಯಾಸ ವಿದ್ಯಾಲಯ ಮುಖ್ಯ ಶಿಕ್ಷಕ ಪ್ರಶಾಂತ್ ಹಾಗೂ ನಿವೃತ್ತ ಶಿಕ್ಷಕ ಸತೀಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು.
Also Read ಪಿಕಪ್ ನಿಂದ ಹೊರಬಂದು ಕಾರಿನೊಳಗೆ ಹೊಕ್ಕ ಅಲ್ಯುಮೀನಿಯಂ ಪಟ್ಟಿಗಳು ! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು